ದಾಸವಾಳ ಹೂವು ಗಿಡದಲ್ಲಿ ನೋಡುವುದಕ್ಕೂ ಚಂದ, ದೇವರ ಪೂಜೆಗೂ ಚಂದ. ಇದರ ಜೊತೆಗೆ ಇದು ಔಷಚಧಿ ಸಸ್ಯವು ಹೌದು. ಯಾಕಂದರೆ ಅದರಲ್ಲಿ ಅನೇಕೆ ಬಗೆಯ ಆರೋಗ್ಯಕಾರಿ ಗುಣಗಳಿವೆ. ಅತಂಹ ದಾಸವಾಳ ಹೂವಿನ ಪ್ರಯೋಜನಗಳು ಯಾವುದೆಲ್ಲ ಎಂದು ಈ ತಿಳಿದುಕೊಳ್ಳೊಣ.
ಶೀತ- ವೈರಸ್ ಬಾಧೆ ದೂರ:
ಶೀತ, ಕೆಮ್ಮು, ತಲೆನೋವು ಕಾಣಿಸಿದಾಗ ದಾಸವಾಳ ಹೂವನ್ನು ತಿಂದರೆ ಅಥವಾ ಅದರಿಂದ ಟೀ ಮಾಡಿ ಕುಡಿದರೆ ಈ ಸಣ್ಣ-ಪುಟ್ಟ ಸಮಸ್ಯೆಗಳಿಂದ ಪಾರಾಗಬಹುದು. ದಾಸವಾಳದಲ್ಲಿ ಚಿಟಿಣi anti oxidants ಅಧಿಕವಿರುವುದರಿಂದ ಇದು ದೇಹದಲ್ಲಿರುವ ಬೇಡದ ಕಲ್ಮಶಗಳನ್ನು ಹೊರಹಾಕಿ, ಶಕ್ತಿ ವರ್ಧಕವಾಗಿ ಕೆಲಸ ಮಾಡುತ್ತದೆ. ಈ ಹೂವಿನಲ್ಲಿ anti oxidants ಮತ್ತು ವಿಟಮಿನ್ ಸಿ ಅಧಿಕವಿರುವುದರಿಂದ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುತ್ತದೆ.
ಮೆನೋಪಾಸ್ ಸಮಸ್ಯೆಗೆ:
ಮಹಿಳೆಯರಿಗೆ ಮೆನೋಪಾಸ್ ಸಮಯದಲ್ಲಿ ಹಾಟ್ ಪ್ಲಾಷ್ ಸಮಸ್ಯೆ ಕಂಡು ಬರುತ್ತದೆ. ತುಂಬಾ ಸೆಕೆಯಾದಂತೆ ಅನಿಸುವುದು, ಮೈಯೆಲ್ಲಾ ಬೆವರುವುದು ಈ ಸಮಸ್ಯೆಯಿಂದ ಹೊರಬರಲು ಕೆಂಪು ಅಥವಾ ಬಿಳಿ ದಾಸವಾಳದ ಹೂವನ್ನು ತಿನ್ನುವುದು ಅಥವಾ ಅದರ ಟೀ ಮಾಡಿ ಕುಡಿಯುವುದು ಒಳ್ಳೆಯದು. ಕೆಲವು ಮಹಿಳೆಯರಲ್ಲಿ ಅಧಿಕ ಬಿಳುಪು ಹೋಗುವ ಸಮಸ್ಯೆ ಕಂಡು ಬರುವುದು, ಈ ಸಮಸ್ಯೆ ಇರುವವರು ದಿನ ಒಂದು ಬಿಳಿ ದಾಸವಾಳ ಹೂ ತಿಂದರೆ ಬಿಳುಪು ಹೋಗುವುದು ಕಮ್ಮಿಯಾಗುವುದು.
ಮೊಡವೆಗೆ ಮದ್ದು:
ಮೊಡವೆ ಕಡಿಮೆ ಮಾಡಲು ದಿನಾ ದಾಸವಾಳ ಹೂವಿನ ಜ್ಯೂಸ್ ಕುಡಿಯುವುದರಿಂದ ಮೊಡವೆ ಬರುವುದನ್ನು ತಡೆಯಬಹುದು, ಅಲ್ಲದೆ ಈ ಜ್ಯೂಸ್ ನಿಮ್ಮ ತ್ವಚೆ ಕಾಂತಿಯನ್ನೂ ಹೆಚ್ಚಿಸುತ್ತದೆ.
ಕೂದಲುದುರುವಿಕೆಗೆ ಮದ್ದು:
ಕೂದಲು ಉದುರುವುದನ್ನು ತಡೆಯುವ ಉತ್ತಮ ಮನೆ ಮದ್ದು ಇದಾಗಿದೆ. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಹೊಂದಬಹುದು. ಕೂದಲು ಉದುರುವುದನ್ನು ತಡೆಯುವುದು ಮಾತ್ರವಲ್ಲ, ಪ್ರತೀದಿನ ಈ ಎಣ್ಣೆ ಹಚ್ಚಿದರೆ ಕಪ್ಪಾದ ಕೂದಲಿನ ಸೌಂದರ್ಯ ನಿಮ್ಮದಾಗುವುದು. ಈ ಹೂವಿನಿಂದ ತೆಗೆದ ರಸ ಕೂದಲಿಗೆ ಹೊಳಪು ನೀಡಿ ಉತ್ತಮ ಕಂಡೀಶನರ್ ನಂತೆ ವರ್ತಿಸುತ್ತದೆ. ತಲೆಹೊಟ್ಟು ನಿವಾರಿಸಿ, ಇದು ಕೂದಲಿಗೆ ಕಪ್ಪು ಬಣ್ಣ ನೀಡುತ್ತದೆ. ದಾಸವಾಳ ಎಲೆಯ ಲೋಳೆ ತಲೆಗೆ ಬಳಸುವುದರಿಂದ ಕೂದಲು ಪಳಫಳ. ಸ್ವಲ್ಪ ತೆಂಗಿನೆಣ್ಣೆಗೆ ೭-೮ ಬಿಳಿ ದಾಸವಾಳದ ಎಲೆ ಹಾಕಿ ಕಾಯಿಸಿ ತಣಿಸಿ ಕೂದಲಿಗೆ ಹಚ್ಚಿ ನಂತರ ಸ್ನಾನ ಮಾಡಿದರೆ ಕೂದಲು ಸ್ಮೂತ್ ಆಗಿ ಹೊಳಪು ಬರುತ್ತದೆ
ದೇಹಕ್ಕೆ ತಂಪು ತಂಪು:
ಬಾಡಿ ಹೀಟ್ ಆಗಿದ್ದರೆ ಅದನ್ನು ಕಮ್ಮಿ ಮಾಡಲು ದಾಸವಾಳ ಹೂವಿನ ಜ್ಯೂಸ್ ಕುಡಿದರೆ ಒಳ್ಳೆಯದು. ದಾಸವಾಳದ ರಸ ದೇಹದ ಉಷ್ಣತೆಯನ್ನು ಕಡಿಮೆಮಾಡುತ್ತದೆ, ಅದರಲ್ಲೂ ಬಿಳಿ ಬಣ್ಣದ ದಾಸವಾಳದಲ್ಲಿ ತಂಪು ನೀಡುವ ಅಂಶ ಹೆಚ್ಚಿರುವುದರಿಂದ, ಅದು ಕಣ್ಣುಗಳನ್ನು ಆಯಾಸದಿಂದ ಮುಕ್ತವಾಗಿರಿಸಿ, ತಂಪನ್ನು ನೀಡುತ್ತದೆ.
ಚರ್ಮದ ಆರೈಕೆ:
ದಾಸವಾಳ ಹೂವಿನ ತೈಲದ ಬಳಕೆಯಿಂದ ಚರ್ಮಕ್ಕೆ ಹೊಳಪು ಬರುತ್ತದೆ. ಹೂವು ಹಾಗೂ ಎಲೆಗಳನ್ನು ಒಣಗಿಸಿ, ಸುಟ್ಟ ಬಳಿಕ ಸಿಗುವ ಬೂದಿಯನ್ನು ಹಚ್ಚಿದರೆ, ಕಣ್ಣಹುಬ್ಬುಗಳು ಹೊಳಪು ಪಡೆಯುತ್ತವೆ. ಈ ಸಸ್ಯದ ಬೇರುಗಳನ್ನು ಎಣ್ಣೆಯಲ್ಲಿ ಹಾಕಿ, ಬೇರಿನಲ್ಲಿರುವ ನೀರಿನ ಅಂಶ ಆವಿಯಾಗುವವರೆಗೂ ಕುದಿಸಬೇಕು. ಗಾಯಗಳಿಗೆ ಈ ಎಣ್ಣೆ ಲೇಪಿಸಿದರೆ ಗುಣಮುಖವಾಗುತ್ತದೆ.
Pingback: ದಿನಂಪ್ರತಿ ಉಗಿ ಸೇವನೆ: ವೈರಸ್ ರೋಗಗಳ ನಿವಾರಣೆ – Rural Tourister