ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ನೀಡಿದ್ದಾರೆ.
ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತದೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ ತಿಳಿಸಿದ್ದಾರೆ.
ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಇಂದಿನ ಸಭೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಮೈಸೂರು, ಕೋಲಾರ, ಮಂಡ್ಯ, ತುಮಕೂರು, ಕೊಡಗು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ ಮೊದಲಾದ ಜಿಲ್ಲೆಗಳ ಡಿಸಿಗಳ ಜೊತೆ ಪಿಎಂ ಸಂವಾದ ನಡೆಸಿದರು.