Ad Widget

ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು. ಮೇ20: ಕೊರೊನಾ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹೊಸ ನಿಯಮ ಹೊರಡಿಸಿರುವುದಾಗಿ ಕೆಲವು ನ್ಯೂಸ್ ವೆಬ್ಸೈಟ್ ಗಳು ತಪ್ಪು ವರದಿ ಮಾಡಿರುವ ಬಗ್ಗೆ ಇದೀಗ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

” ದ.ಕ.ಜಿಲ್ಲೆಯಾದ್ಯಂತ ಕೆಲವು ನಿರ್ಬಂಧಗಳೊಂದಿಗೆ ಹೊಸ ಮಾರ್ಗಸೂಚಿ ಜಾರಿಯಾಗುತ್ತದೆ, ವಾರದಲ್ಲಿ ಎರಡು ದಿನ ಮಾತ್ರ ಸಾಮಾಗ್ರಿ ಖರೀದಿಗೆ ಅವಕಾಶ ನೀಡಲಾಗುತ್ತದೆ, ಮೇ. 24 ರಿಂದ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಹಾಗೂ ವೆಬ್ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿತ್ತು. ಈ ಬಗ್ಗೆ ತಕ್ಷಣ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆಗೊಂಡಿಲ್ಲ, ಸದ್ಯಕ್ಕೆ ಈಗಿನ ಮಾರ್ಗಸೂಚಿಯೇ ಜಾರಿಯಲ್ಲಿರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅದೇ ರೀತಿ ಲಾಕ್ ಡೌನ್ ಬಗ್ಗೆ ಕೆಲವು ವೆಬ್ ಮಾಧ್ಯಮದಲ್ಲಿ ಪ್ರಸಾರ ವಾಗಿರುವುದು ‘ಅದು ತಪ್ಪು ಮಾಹಿತಿ’ ಎಂದು ಡಾ.‌ಕೆ.ವಿ.ರಾಜೇಂದ್ರರವರು ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ಈ ರೀತಿಯ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ. ಈಗಾಗಲೇ ಸುಳ್ಳು ಸುದ್ದಿ ಬಿತ್ತರಿಸಿರುವ ಸಂಸ್ಥೆಯ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

Leave a Comment

Your email address will not be published. Required fields are marked *