ಪರಿಸರವಾದಿ ಹಾಗೂ ಅಪ್ಪಿಕೊ (ಚಿಪ್ಕೊ) ಚಳವಳಿಯ ನೇತಾರ ಸುಂದರಲಾಲ್ ಬಹುಗುಣ (94) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಸುಂದರಲಾಲ್ ಬಹುಗುಣ ಅವರು ಮೇ 8ರಂದು ರಿಷಿಕೇಶದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಸ್ಥಳೀಯ ವರದಿಗಳ ಪ್ರಕಾರ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಮಧುಮೇಹವನ್ನು ಹೊಂದಿದ್ದರು. ಇದನ್ನು ಕೊರೋನಾ ವೈರಸ್ ಪ್ರಕರಣಗಳಲ್ಲಿ ಕೊಮೊರ್ಬಿಡಿಟಿ ಎಂದು ಪರಿಗಣಿಸಲಾಗುತ್ತದೆ.
ತಜ್ಞ ವೈದ್ಯರ ತಂಡ ಬಹುಗುಣ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಎಲೆಕ್ಟ್ರೋಲೈಟ್‌ಗಳು ಮತ್ತು ಯಕೃತ್ತಿನ ಕಾರ್ಯವನ್ನು ಒಳಗೊಂಡಂತೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಲು ಮತ್ತು ಮೇಲ್ವಿಚಾರಣೆ ಮಾಡುತ್ತಿತ್ತು. ಅವರ ಪರೀಕ್ಷೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಏಮ್ಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರೀಶ್ ಥಪ್ಲಿಯಲ್ ಗುರುವಾರ ತಿಳಿಸಿದ್ದರು.