Ad Widget .

ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಮಂಬೈ: ಮುಂದಿನ ತಿಂಗಳು ಸೀಮಿತ ಓವರ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಬ್ಯಾಟ್ಸ್ ಮ್ಯಾನ್ ‘ಭಾರತದ ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Ad Widget . Ad Widget .

ಭಾರತದ ಒಂದು ತಂಡ ಮುಂದಿನ ಎರಡು ತಿಂಗಳುಗಳಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅದೇ ಸಮಯ ಭಾರತದ ಇನ್ನೊಂದು ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ. ಇಂಗ್ಲೆಂಡ್ ಪ್ರವಾಸ ತಂಡವನ್ನು ಕೋಚ್ ರವಿಶಾಸ್ತ್ರಿ ತರಬೇತುಗೊಳಿಸಿದರೆ, ನಾಯಕನಾಗಿ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ಶ್ರೀಲಂಕಾ ಪ್ರವಾಸ ತಂಡವನ್ನು ರಾಹುಲ್ ದ್ರಾವಿಡ್ ತರಬೇತಿಯಲ್ಲಿ, ಅನುಭವಿ ಆರಂಭಿಕ ಶಿಖರ್ ಧವನ್ ಅಥವಾ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮುನ್ನಡೆಸುವ ಸಾಧ್ಯತೆಯಿದೆ.

Ad Widget . Ad Widget .

ಕನ್ನಡಿಗ ದ್ರಾವಿಡ್ ಈ ಹಿಂದೆ ಭಾರತ ಕಿರಿಯರ ತಂಡದ ಕೋಚ್ ಆಗಿ, ಹಲವು ಬಾರಿ ಕಿರಿಯರ ವಿಶ್ವಕಪ್ ತಂದುಕೊಡುವಲ್ಲಿ ಯಶಸ್ವಿ ಪ್ರಮುಖ ಪಾತ್ರ ವಹಿಸಿದ್ದರು. ಸದಾ ಹಸನ್ಮುಖಿ ಹಾಗೂ ಶಾಂತ ಸ್ವಭಾವದ ದ್ರಾವಿಡ್ ಅವರು ಯುವ ಪ್ರತಿಭೆಗಳನ್ನು ತನ್ನ ಗರಡಿಯಲ್ಲಿ ಪಳಗಿಸಿ ಭಾರತ ತಂಡಕ್ಕೆ ತನ್ನ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ. ರಾಹುಲ್ ಬಳಿ ತರಬೇತಿ ಪಡೆದ ಯುವ ಪ್ರತಿಭೆಗಳು ಇತ್ತೀಚಿನ ದಿನಗಳಲ್ಲಿ ಮಿಂಚುತ್ತಿರುವುದು ಇದಕ್ಕೆ ಸಾಕ್ಷಿ.

Leave a Comment

Your email address will not be published. Required fields are marked *