Ad Widget .

ಲಾಠಿ‌ ಏಟಿಗೆ ಬಾಲಕ ಸಾವು: ಯು.ಪಿ ಪೊಲೀಸರಿಂದ ಅಮಾನವೀಯ ಕೃತ್ಯ

ಉತ್ತರ ಪ್ರದೇಶ: ರಾಜ್ಯದಲ್ಲಿ ನಡೆಯುತ್ತಿರುವ ಕೊರೊನಾ ಕರ್ಫ್ಯೂವನ್ನು ಉಲ್ಲಂಘಿಸಿದ್ದಕ್ಕಾಗಿ 17 ವರ್ಷದ ಬಾಲಕನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಭಟ್​ಪುರಿ ಗ್ರಾಮದಲ್ಲಿ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಾಲಕ ತನ್ನ ಮನೆಯ ಹೊರಗೆ ತರಕಾರಿ ಮಾರುತ್ತಿದ್ದ. ಈ ವೇಳೆ ಕೊರೊನಾ ಕರ್ಫ್ಯೂ ಉಲ್ಲಂಘಿಸಿದ ಆರೋಪದ ಮೇಲೆ ಕಾನ್ಸ್​ಟೇಬಲ್​ ಹಿಡಿದು ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸ್ ಠಾಣೆಗೆ ಕರೆದೊಯ್ದು ಮತ್ತೆ ಬಾಲಕನ ಮೇಲೆ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಲಕ ಗಂಭೀರವಾಗಿ ಗಾಯಗೊಂಡು ಅಸ್ವಸ್ಥನಾಗಿದ್ದ. ಕೂಡಲೇ ಆತನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು.

Ad Widget . Ad Widget . Ad Widget .

ಈ ಘಟನೆಗೆ ಪೊಲೀಸರೇ ಕಾರಣವೆಂದು ಬಾಲಕನ ಕುಟುಂಬಸ್ಥರು ಮತ್ತು ಗ್ರಾಮದ ಜನ ಆರೋಪಿಸಿ ಲಖನೌ ರಸ್ತೆ ಕ್ರಾಸಿಂಗ್​ ಬಳಿ ಜಮಾಯಿಸಿ ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಬಾಲಕನ ಕುಟುಂಬಕ್ಕೆ ಸರ್ಕಾರಿ ಕೆಲಸ ಮತ್ತು ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಕಾನ್ಸ್​ಟೇಬಲ್ ವಿಜಯ್ ಚೌಧರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಗೃಹರಕ್ಷಕ ಸತ್ಯಪ್ರಕಾಶ್​ನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಮತ್ತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *