ಬಹುಮತ ಸಾಬೀತುಪಡಿಸುವಲ್ಲಿ ಪಕ್ಷಗಳು ವಿಫಲ ಸರ್ಕಾರ ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಿದ ನೇಪಾಳ ರಾಷ್ಟ್ರಪತಿ

ಕಾಠ್ಮಂಡು: ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ವಿರೋಧ ಪಕ್ಷದ ನಾಯಕರು ಶುಕ್ರವಾರ ನಿಗದಿಪಡಿಸಿದ ಗಡುವಿನೊಳಗೆ ಸರ್ಕಾರ ರಚನೆಗೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ.

Ad Widget ... ..

ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರು ಶನಿವಾರ ನೇಪಾಳ ಸರ್ಕಾರವನ್ನು ವಿಸರ್ಜಿಸಿ ನವೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿ ಮಾಡಿ ಮಧ್ಯರಾತ್ರಿ ಅಚ್ಚರಿಯ ಪ್ರಕಟಣೆ ಹೊರಡಿಸಿದ್ದಾರೆ.

Ad Widget

ಮೊದಲ ಹಂತದ ಚುನಾವಣೆಯನ್ನು ನವೆಂಬರ್ 12 ರಂದು ಮತ್ತು ಎರಡನೇ ಹಂತದ ಚುನಾವಣೆಯನ್ನು ನವೆಂಬರ್ 19 ರಂದು ನಡೆಸಲು ಆದೇಶಿಸಲಾಗಿದೆ.

Leave a Comment

Your email address will not be published. Required fields are marked *