ಕಡಬ: ಕಬ್ಬಿಣದ ಸಲಾಕೆಗೆ ವಿದ್ಯುತ್ ತಂತಿ ತಗುಲಿ ತೆಂಗಿನಕಾಯಿ ಕೊಯ್ಯುತ್ತಿದ್ದ ಯುವಕ ಮೃತ್ಯು

ಕಡಬ: ಕಬ್ಬಿಣದ ಸಲಾಕೆ ಸಹಾಯದಿಂದ ಮರದಿಂದ ತೆಂಗಿನಕಾಯಿ ಕೇಳುತ್ತಿದ್ದಾಗ ಸಲಕ್ಕೆ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಡಬೆಟ್ಟು ಎಂಬಲ್ಲಿ ನಡೆದಿದೆ.

Ad Widget ... ..

ಕುಟ್ರುಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ 35 ವರ್ಷದ ಲಿಜು ಮೃತಪಟ್ಟ ದುರ್ದೈವಿ. ಲಿಜು ತನ್ನ ಮನೆಯಲ್ಲಿ ಇಂದು ಬೆಳಿಗ್ಗೆ  ತೆಂಗಿನಕಾಯಿ ಕೀಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *