ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು

ಮೂಡಿಗೆರೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಆರೋಪಿ ಎನ್ನಲಾಗಿದ್ದ ದಲಿತ ಯುವಕನೋರ್ವನಿಗೆ ತಲೆಕೆಳಗಾಗಿ ಕಟ್ಟಿಹಾಕಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಯನ್ನು ಅಮಾನತು ಮಾಡಲಾಗಿದೆ.

Ad Widget ... ..

ಮೇ10ರಂದು ಪುನೀತ್ ಎಂಬವನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗ ಈ ಘಟನೆ ನಡೆದಿತ್ತು. ನಂತರ ಪಿಎಸ್ ಐ ಅರ್ಜುನ್ ಅವರ ಈ ಅಮಾನವೀಯ ವರ್ತನೆ ತಿಳಿಯುತ್ತಿದ್ದಂತೆ ಹಲವೆಡೆ ಪಿಎಸೈ ಅಮಾನತಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು. ಅದರಂತೆ ಅರ್ಜುನ್ ಅವರನ್ನು ಪಶ್ಚಿಮ ವಲಯ ಐಜಿಪಿ ನಿನ್ನೆ ಸೇವೆಯಿಂದ ಅಮಾನತುಗೊಳಿಸಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖೆಯನ್ನು ಪುತ್ತೂರು ಡಿವೈಎಸ್ಪಿಗೆ ವಹಿಸಲಾಗಿದೆ.

Ad Widget

Leave a Comment

Your email address will not be published. Required fields are marked *