ಬೆಂಗಳೂರು:ಮೇ.24: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿದೆ.
ಮೇ 24 ರಂದು 6 ಬೆಳಗ್ಗೆ ಗಂಟೆಯವರೆಗೆ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಜೂನ್ 7 ರವರೆಗೆ ವಿಸ್ತರಿಸಲಾಗಿದೆ. ಕಟ್ಟುನಿಟ್ಟಾಗಿ ಲಾಕ್ ಡೌನ್ ಅನುಷ್ಠಾನಕ್ಕೆ ಪೊಲೀಸರು ಸ್ಥಳೀಯ ಆಡಳಿತಗಳಿಂದ ಕ್ರಮಕೈಗೊಳ್ಳಲಾಗಿದೆ. ಅನಗತ್ಯವಾಗಿ ಸಂಚರಿಸುವವರಿಗೆ ಬ್ರೇಕ್ ಹಾಕಲಾಗುತ್ತಿದ್ದು, ವಾಹನ ವಶ, ದಂಡ ವಸೂಲಿ ಸೇರಿ ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜ್ಯಾದ್ಯಂತ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಆಯಾ ಜಿಲ್ಲೆಗಳಲ್ಲಿ ಬದಲಾವಣೆಗೆ ಒಳಪಟ್ಟಿದೆ. ಕೆಲವು ಕಡೆ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗಿದೆ. ಬೇಕಾಬಿಟ್ಟಿ ಓಡಾಡಿದ್ರೆ ಪೊಲೀಸರಿಂದ ಒದೆ, ದಂಡ ಎರಡೂ ಸಿಗಲಿದೆ.