ಬೆಂಗಳೂರು: ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ತಿಳಿಸಿದರು.
ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಮುಗಿದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.