Ad Widget .

ಹಾಸಿಗೆ‌ ಬ್ಲಾಕ್ ನಿಂದ ಹೇಸಿಗೆ ಮಾಡಿಕೊಂಡ್ರಾ ಸತೀಶ್‌ರೆಡ್ಡಿ.? ಶಾಸಕರ ಆಪ್ತ ಅಂದರ್

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಿಬಿಎಂಪಿ ವಾರ್ ರೂಂ ನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಾಬು ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

Ad Widget . Ad Widget .

ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೋವಿಡ್ ನಿಂದ ಗುಣಮುಖರಾಗುತ್ತಿದ್ದಂತೆ ಬಾಬುರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಈ ಹಿಂದೆ ಬಂಧನಕ್ಕೀಡಾಗಿದ್ದ ಮಹಿಳೆ, ಬಾಬು ಮೂಲಕ ಬೆಡ್ ಬ್ಲಾಕ್ ಮಾಡಿಸುತ್ತಿದ್ದಳು ಎನ್ನಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬಿಬಿಎಂಪಿಗೆ ಮೀಸಲಿಟ್ಟಿದ್ದ ಬೆಡ್ ಗಳನ್ನು ಬ್ಲಾಕ್ ಮಾಡಿಸಿ 50 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಇದೀಗ ಶಾಸಕರ ಆಪ್ತನನ್ನೇ ಬಂಧಿಸಲಾಗಿದೆ.

Ad Widget . Ad Widget .

ಈ ಹಿಂದೆ ಕೂಡಾ ಶಾಸಕ ಸತೀಶ್ ರೆಡ್ಡಿ ಮೇಲೆ ಬೆಡ್ ಬ್ಲಾಕ್ ಆರೋಪ ಕೇಳಿಬಂದಿತ್ತು. ಇದೀಗ ಆಪ್ತ ಅರೆಸ್ಟ್‌ ಆಗಿರುವುದರಿಂದ ರಾಜಕೀಯ ವಲಯದಲ್ಲಿ ಸಣ್ಣ ಸುಳಿಗಾಳಿ ಬೀಸಿದಂತಾಗಿದೆ. ತನಿಖೆ ಚುರುಕಾಗಿದ್ದು, ಎಲ್ಲಿಯವರೆಗೆ ತಲುಪುತ್ತೋ ಎಂಬುದನ್ನು ಕಾದುನೋಡಬೇಕಿದೆ.

Leave a Comment

Your email address will not be published. Required fields are marked *