Ad Widget .

ಅಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ: ಮೇ.27ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಹೇರಿರುವ ಲಾಕ್‍ಡೌನ್‍ನಿಂದ ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಆಟೋರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರಿಗೆ ತಲಾ 3 ಸಾವಿರ ರೂ. ಸಹಾಯಧನ ಘೋಷಣೆ ಮಾಡಲಾಗಿದ್ದು, ನಾಳೆ ಮೇ 27ರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Ad Widget . Ad Widget .

ಇಂದು ಈ ಸಂಬಂಧ ಮಾತನಾಡಿರುವ ಅವರು
ಅರ್ಹ ಅಭ್ಯರ್ಥಿಗಳು `ಸೇವಾ ಸಿಂಧು’ ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದು. ಬಡ ಚಾಲಕರ ನೆರವಿಗೆ ಮುಂದಾಗಿರುವ ಸರಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *