ಉಡುಪಿ : ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಸೂಕ್ತ ತನಿಖೆಗೆ ಒತ್ತಾಯ

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್  ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ.

Ad Widget ... ..

ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಅದೇ ರೀತಿ ಬೆಳ್ಮಣ್ ಪಂಚಾಯತ್  ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಹೊಳೆಯುವ ಹರಳಿನ ರೂಪದ ವಸ್ತುಗಳು ಸಿಕ್ಕಿದೆ.

Ad Widget

ಅನ್ನ ಮಾಡಲು ಅಕ್ಕಿ ಶುಚಿಗೊಳಿಸುವಾಗ ಈ ಅಕ್ರಮ ಬೆಳಕಿಗೆ ಬಂದಿದ್ದು, ಎರಡು ಗೋಣಿಗಳಲ್ಲಿ ಬಂದ ಅಕ್ಕಿಯಲ್ಲಿ ಮಾತ್ರ ಪ್ಲಾಸ್ಟಿಕ್ ರೂಪದ ವಸ್ತು ಪತ್ತೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪಂಚಾಯತ್ ಅಧ್ಯಕ್ಷರು ಆಹಾರ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *