ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು

ಸುಳ್ಯ: ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಓರ್ವರಿಗೆ ಲಾರಿ ಢಿಕ್ಕಿಯಾಗಿ ಅವರು ಮೃತಪಟ್ಟ ಘಟನೆ ಇಂದು ಕಲ್ಲುಗುಂಡಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಲ್ಲುಗುಂಡಿ ನಿವಾಸಿ 50 ವರ್ಷ ಪ್ರಾಯದ ಚಂದ್ರಶೇಖರ ಎಂದು ಗುರುತಿಸಲಾಗಿದೆ.

Ad Widget ... ..

ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ್ ಅವರು ಮನೆಗೆ ಹಿಂದಿರುಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು, ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಲ್ಲುಗುಂಡಿ  ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *