ಭಾರತರತ್ನ ಸಿಎನ್ಆರ್ ರಾವ್ ಗೆ ಪ್ರತಿಷ್ಟಿತ ಇಎನ್ಐ ಪುರಸ್ಕಾರ

ಬೆಂಗಳೂರು: ಭಾರತ ರತ್ನ ಪುರಸ್ಕೃತ ವಿಜ್ಞಾನಿ  ಸಿ.ಎನ್.ಆರ್ ರಾವ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಇಎನ್ ಐ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ ಈ ಪ್ರಶಸ್ತಿ ಸಂದಿದೆ  ಎಂದು ಕೇಂದ್ರ  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

Ad Widget ... ..

ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದು ಗುರುತಿಸಲಾಗಿರುವ
ಇದನ್ನು ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ರೋಮ್ ನಲ್ಲಿ ಮುಂಬರುವ ಅಕ್ಟೋಬರ್ 14 ರಂದು ನಡೆಯಲಿರುವ ಸಮಾರಂಭದಲ್ಲಿ ಅಧಿಕೃತವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

Ad Widget

ಪ್ರೊಫೆಸರ್ ರಾವ್ ಶಕ್ತಿಯ ಮೂಲವಾಗಿ ಹೈಡ್ರೋಜನ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೈಡ್ರೋಜನ್ ಸಂಗ್ರಹಣೆ, ಹೈಡ್ರೋಜನ್ ನ ದ್ಯುತಿ ರಾಸಾಯನಿಕ ಮತ್ತು ಎಲೆಕ್ಟ್ರೋಕೆಮಿಕಲ್ ಉತ್ಪಾದನೆ, ಹೈಡ್ರೋಜನ್ ನ ಸೌರ ಉತ್ಪಾದನೆ ಮತ್ತು ಲೋಹವಲ್ಲದ ವೇಗವರ್ಧನೆ ಅವರ ಕೆಲಸದ ಪ್ರಮುಖ ಅಂಶಗಳಾಗಿವೆ.Attachments area

Leave a Comment

Your email address will not be published. Required fields are marked *