ನವದೆಹಲಿ: ಕೋವಿಡ್ 19 ಹಿನ್ನೆಲೆಯಲ್ಲಿ, ರಾಷ್ಟ್ರವ್ಯಾಪಿ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂನ್ 30ರವರೆಗೆ ಮುಂದುವರೆಸುವಂತೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲ, ಕೊರೋನಾ ನಿಗ್ರಹಕ್ಕಾಗಿ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಆಡಳಿತ ವರ್ಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹೆಚ್ಚಿನ ರಾಜ್ಯಗಳಲ್ಲಿ ಕೋರೋನಾ ಸೋಂಕಿಗೊಳಗಾಗಿ ಜನರು ಸಾವಿಗೀಡಾಗುತ್ತಿರುವ ಸಂಖ್ಯೆ ಹಾಗು ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುವವರೆಗೂ ಸದ್ಯ ಇರುವ ಎಲ್ಲಾ ನಿರ್ಬಂಧಗಳನ್ನು ಜೂನ್ ತಿಂಗಳ 30ರವರೆಗೆ ಮುಂದುವರಿಸುವಂತೆ ಈ ಮೂಲಕ ಎಲ್ಲ ರಾಜ್ಯ ಸರಕಾರಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.