ಮಂಗಳೂರು : ವಿದೇಶದಿಂದ ಅಕ್ರಮವಾಗಿ ತರಲಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಭಟ್ಕಳ ಮೂಲದ ಆರೋಪಿ ಸಿದ್ದಿಕ್ ಮಿಕ್ಡಾಮ್ ಹುಸೇನ್(27) ಬಂಧಿತ ಆರೋಪಿ. ಆತ ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ಸ್ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಸುಮಾರು 13 ಲಕ್ಷ ರೂ.ಬೆಲೆ ಬಾಳುವ 262 ಗ್ರಾಂ ಚಿನ್ನವನ್ನು ಗುದನಾಳದಲ್ಲಿ, ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದದ್ದು ಪತ್ತೆಯಾಗಿದೆ.