Ad Widget .

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಇಂದು ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

Ad Widget . Ad Widget .

ಕಳೆದ ಮೂರು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘು ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಳಗಿನ ಜಾವ 4.30ಕ್ಕೆ ಇಹಲೋಕ ತ್ಯಜಿಸಿದ್ದಾರೆ.

Ad Widget . Ad Widget .

ಸಹ ನಿರ್ದೇಶಕನಾಗಿ ಡಾ. ರಾಜ್ ಕುಮಾರ್ ಅಭಿನಯದ ನಾಗಪೂಜಾ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿ ತಿಪಟೂರು ರಘು, ಬಳಿಕ ಊರ್ವಶಿ, ಕೆಂಪು ಹೋರಿ, ಸ್ವರ್ಣ ಮಹಲ್ ರಹಸ್ಯ, ನಾಗ ಕಾಳ ಭೈರವ, ಬೆಂಕಿ ಬಿರುಗಾಳಿ, ಬೆಟ್ಟದ ಹುಲಿ, ವೀಣೆ ಸೇರಿದಂತೆ 16ಕ್ಕೂ ಹೆಚ್ಚು ಸಿನಿಮಾಗಳನ್ನ ತಿಪಟೂರು ರಘು ನಿರ್ದೇಶನ ಮಾಡಿದ್ದಾರೆ.

ಪತ್ನಿ, ಪುತ್ರ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ ತಿಪಟೂರು ರಘು ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ.

Leave a Comment

Your email address will not be published. Required fields are marked *