Ad Widget .

ಇನ್ನೆರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಸಿಎಂ ಬಿಎಸ್‌ವೈ, ಎರಡನೇ ಹಂತದ ಕೋವಿಡ್ ಪ್ಯಾಕೇಜ್ ರೆಡಿ ಆಗುತ್ತಿದೆ. ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕೋವಿಡ್ ಎರಡನೇ ಹಂತದ ಲಾಕ್‌ಡೌನ್ ಹಿನ್ನೆಲೆಯಲ್ಲಿ ೧೨೫೦ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಈ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲು ನಿರ್ಧರಿಸಿದೆ ಎಂದಿದ್ದಾರೆ.

Ad Widget . Ad Widget .

ಪರಿಸ್ಥಿತಿ ನೋಡಿಕೊಂಡು ಲಾಕ್ಡೌನ್ ವಿಸ್ತರಣೆ:

Ad Widget . Ad Widget .

ಇನ್ನು ಲಾಕ್‌ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಜೂನ್ ೫, ೬ ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡಲಾಗುವುದು. ಈ ಕುರಿತಾಗಿ ತಜ್ಞರ ಜೊತೆ ಹಾಗೂ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ಇನ್ನು ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ. ಲಾಕ್ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ ಎಂದು ಇದೇ ವೇಳೆ ಬಿಎಸ್ ಯಡಿಯೂರಪ್ಪ ತಿಳಿಸಿದರು.

Leave a Comment

Your email address will not be published. Required fields are marked *