Ad Widget .

ಜೂ.7ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಕಂಟಿನ್ಯೂ. ಸಿಎಂ ಹೇಳಿದ್ದೇನು?

ಬೆಂಗಳೂರು : ಜೂನ್ 7 ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸುವ ಕುರಿತಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜನರು ಸಹಕರಿಸಿದರೆ ಲಾಕ್‌ಡೌನ್ ಮುಂದುವರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿರುವ ಅವರು ಗೃಹ ಕಚೇರಿ ಕೃಷ್ಣದಲ್ಲಿ ಐದು ಜಿಲ್ಲೆಗಳ ಜನಪ್ರತಿನಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದರು. ಲಾಕ್​ಡೌನ್ ಜೂನ್ 7ರವರೆಗೂ ಮುಂದುವರೆಯಲಿದ್ದು, ಅಲ್ಲಿಯವರೆಗೂ ಇರುತ್ತದೆ. ಅಲ್ಲಿವರೆಗೂ ಬಿಗಿಯಾದ ಕ್ರಮ ಮುಂದುವರೆಯಲಿದೆ.

Ad Widget . Ad Widget . Ad Widget .


ಕೊರೊನಾ ಕಡಿಮೆ ಆದರೆ ಲಾಕ್​ಡೌನ್ ಮುಂದುವರಿಸುವುದಿಲ್ಲ. ಜನ ಸಹಕರಿಸಿದರೆ ಲಾಕ್​ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಬವಿಸಲ್ಲ ಎಂದು ತಿಳಿಸಿದರು. ಐದು ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದ್ದೇನೆ. ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರತೀ ಗ್ರಾಮ ಪಂಚಾಯತ್‌ನಲ್ಲೂ ಕೋವಿಡ್ ನಿಯಂತ್ರಣಕ್ಕೆ ಸೂಚಿಸಲಾಗಿದೆ.
ಕೋವಿಡ್ ನಿಯಂತ್ರಣಕ್ಕೆ ಕ್ರಮವಹಿಸಲು ಸೂಚನೆ ನೀಡಿದ್ದೇನೆ. ಪಿಎಂ ಕೇರ್ ವೆಂಟಿಲೇಟರ್ ಬಳಕೆ ಮಾಡದಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವೆಂಟಿಲೇಟರ್‌ನಲ್ಲಿ ಕೆಲ ಸಮಸ್ಯೆ ಇದೆ. ಅದನ್ನ ಸರಿಪಡಿಸುವ ಕೆಲಸ ಮಾಡಲಾಗ್ತಿದೆ ಎಂದರು.

ಬ್ಲ್ಯಾಕ್ ಫಂಗಸ್ ಲಸಿಕೆ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸಚಿವ ಸದಾನಂದಗೌಡರ ಜೊತೆ ಮಾತನಾಡಿದ್ದೇವೆ. ಲಸಿಕೆ ಪೂರೈಕೆ ಮಾಡೋದಾಗಿ ಹೇಳಿದ್ದಾರೆ. ಅಲ್ಲೊಂದು ಇಲ್ಲೊಂದು ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟ ಪ್ರಕರಣ ಕಂಡು ಬರುತ್ತಿವೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

Leave a Comment

Your email address will not be published. Required fields are marked *