Ad Widget

ರಾಜ್ಯಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget . Ad Widget . Ad Widget . Ad Widget . Ad Widget

ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಲಿವೆ. ಈ ಕಾರಣದಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Ad Widget . Ad Widget .

ಭಾನುವಾರ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *