ಬೆಂಗಳೂರು : ಲಾಕ್ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಈ ತಿಂಗಳ ವಾಹನ ತೆರಿಗೆ ಕಟ್ಟಬೇಕಾಗಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ನೋಂದಾಯಿತವಾಗಿರುವ ಎಲ್ಲಾ ಪ್ರಯಾಣಿಕ ವಾಹನಗಳಿಗೆ ಅನ್ವಯವಾಗುವಂತೆ 2021ರ ಮೇ ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದಾದ್ಯಂತ ವಾಹನ ಸಂಚಾರಕ್ಕೆ ನಿಷೇಧವನ್ನು ಹೇರಲಾಗಿದ್ದು ತುರ್ತು ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಜೊತೆಗೆ ಜನರು ಸಂಪಾದನೆ ಇಲ್ಲದೆ ಮನೆಯಲ್ಲೇ ಕೂರುವಂತಾಗಿದೆ ಇದನ್ನು ಗಮನದಲ್ಲಿಟ್ಟು ಸರಕಾರ ಮೇ.ತಿಂಗಳ ಮೋಟಾರು ವಾಹನ ತೆರಿಗೆಯನ್ನು ಕಟ್ಟಬೇಕಾಗಿಲ್ಲ ಎಂದಿದೆ. ಜೂನ್ ತಿಂಗಳ ತೆರಿಗೆವಿನಾಯಿತಿ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.