Ad Widget .

ಕನ್ನಡದಲ್ಲಿ ನ್ಯಾಯ ಬರೆಯುತ್ತಿದ್ದ ಕೆ.ವಿ ವಾಸುದೇವ ಮೂರ್ತಿ ಇನ್ನಿಲ್ಲ

ಬೆಂಗಳೂರು(ಮೇ.30): ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಆದೇಶಗಳನ್ನು ಬರೆಸಿದ ಕೀರ್ತಿಗೆ ಭಾಜನರಾಗಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ.ವಿ. ವಾಸುದೇವ ಮೂರ್ತಿ (83) ಹೃದಯಾಘಾತದಿಂದ ಶನಿವಾರ ನಿಧನರಾದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಹನುಮಂತನಗರದ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಸಂಜೆ 6.30ಕ್ಕೆ ಚಾಮರಾಜಪೇಟೆಯ ಟಿ.ಆರ್‌.ಮಿಲ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಸಮಾಜಸೇವೆ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು, ಕಾನೂನು ಪದವಿ ಪಡೆದ ಬಳಿಕ ಶಿವಮೊಗ್ಗದ ನ್ಯಾಯವಾದಿ ವೆಂಕಟರಾಮಾಶಾಸ್ತಿರಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸಿದ್ದರು.
ತರೀಕೆರೆಯಲ್ಲಿ ನ್ಯಾಯವಾದಿಯಾಗಿ ಜನಮನ್ನಣೆ ಪಡೆದರು. 1971ರಲ್ಲಿ ನ್ಯಾಯಾಧೀಶರಾಗಿ ನೇಮಕವಾದ ಅವರು, ನ್ಯಾಯಾಂಗ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕನ್ನಡದಲ್ಲಿ ಅತ್ಯುತ್ತಮವಾಗಿ ಆದೇಶಗಳನ್ನು ಬರೆಯುತ್ತಿದ್ದರು. ಇದೇ ಕಾರಣದಿಂದ ಅವರನ್ನು ಸರ್ಕಾರ ಗೌರವಿಸಿತ್ತು.

Ad Widget . Ad Widget . Ad Widget .

Leave a Comment

Your email address will not be published. Required fields are marked *