ಬೆಂಗಳೂರು: ಈವರೆಗೆ ವಯಸ್ಕರಲ್ಲಿ ಮಾತ್ರ ಕಾಣಸಿಗುತ್ತಿದ್ದ ಬ್ಲಾಕ್ ಫಂಗಸ್ ಸೋಂಕು ಇದೀಗ ಮಕ್ಕಳಲ್ಲಿ ಪತ್ತೆಯಾಗಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೋವಿಡ್ ಸೋಂಕಿಗೊಳಗಾದ ಚಿಕಿತ್ಸೆ ಪಡೆಯುತ್ತಿದ್ದ ಬಯಲುಸೀಮೆಯ ಮಕ್ಕಳಲ್ಲಿ ತಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಮಕ್ಕಳಿಗೆ ತೀವ್ರ ಅನಾರೋಗ್ಯ ಬಾಧಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಪರೀಕ್ಷೆಗೆ ಒಳಪಡಿಸಿದಾಗ, ಚಿತ್ರದುರ್ಗ ಜಿಲ್ಲೆಯ ಒಬ್ಬ ಬಾಲಕ ಹಾಗೂ ಬಳ್ಳಾರಿಯ ಓರ್ವ ಬಾಲಕಿ ಗೆ ಬ್ಲಾಕ್ ಫಂಗಸ್ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರಿಗೂ ಅಲ್ಲಿಯ ಜಿಲ್ಲಾಸ್ಪತ್ರೆಗಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್ಲಿನ ವೈದ್ಯಾಧಿಕಾರಿಗಳು ಆರೋಗ್ಯ ಇಲಾಖೆಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.