Ad Widget .

ಜೂ.15ಕ್ಕೆ ಬರಲಿದೆ ಇಪ್ಕೋ ನ್ಯಾನೋ ಯೂರಿಯಾ: ಡಿ.ವಿ

ನವದೆಹಲಿ(ಮೇ 30): ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.ನ್ಯಾನೋ-ಯುರಿಯಾ ಉಪಯೋಗದ ಬಗ್ಗೆ ಇಫ್ಕೋ ಸಂಸ್ಥೆಯವರು ಶನಿವಾರ ಏರ್ಪಡಿಸಿದ್ದ ವೆಬ್ಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿದ ಸದಾನಂದ ಗೌಡ, ಅವರು ಇದು ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚದಲ್ಲಿ ಸುಮಾರು 15 ಪ್ರತಿಶತ ಕಡಿಮೆಯಾಗಲಿದೆ. ಇನ್ನು ಇಳುವರಿಯಲ್ಲಿ 15ರಿಂದ 20ರಷ್ಟು ಹೆಚ್ಚಳವಾಗಲಿದೆ ಎಂದ ಸಚಿವರು ರೈತರು ಇದನ್ನು ಹೆಚ್ಚೆಚ್ಚು ಬಳಕೆ ಮಾಡಿ ಇದರ ಲಾಭ ಪಡೆದುಕೊಳ್ಳಬೇಕು.
ಭಾರತದಲ್ಲಿ ಈ ವರ್ಷ 350 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕಾಗಬಹುದು ಎಂದು ಅಂದಾಜು ಮಾಡಲಾಗಿದೆ. ಆದರೆ ಈಗ ನ್ಯಾನೋ ಯೂರಿಯಾ ಮಾರುಕಟ್ಟೆಗೆ ಬರುತ್ತಿರುವುದರಿಂದ ಮಾಮೂಲಿ ಯೂರಿಯಾ ಬಳಕೆ ಗಣನೀಯವಾಗಿ ಕಡಿಮೆಯಾಗಲಿದ್ದು ಸುಮಾರು 600 ಕೋಟಿ ರೂ ಸಬ್ಸಿಡಿ ಉಳಿತಾಯವಾಗಲಿದೆ. ಯೂರಿಯಾ ಆಮದು ಕಡಿಮೆಯಾಗಿ ವಿದೇಶಿ ವಿನಿಮಯ ಉಳಿಯಲಿದೆ. ಎಲ್ಲ ದೃಷ್ಟಿಯಿಂದಲೂ ನ್ಯಾನೋ ಯೂರಿಯಾ ಲಾಭಕರವಾಗಿದ್ದು ಇದನ್ನು ಜನಪ್ರಿಯಗೊಳಿಸಲು ಸರ್ಕಾರವು ಗಮನಹರಿಸಲಿದೆ ಎಂದರು.

Ad Widget . Ad Widget . Ad Widget .

Leave a Comment

Your email address will not be published. Required fields are marked *