May 2021

ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು, ಮೇ ೨೧: ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್ ಸವಾರನಿಗೆ  ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮಧು ಕೆ. ಮೃತ ಸೈಕಲ್ ಸವಾರ ಎಂದು ಗುರುತಿಸಲಾಗಿದೆ. ಈತ ಹೈರೇಂಜ್ ಸೆಕ್ಯುರಿಟಿ ಸರ್ವಿಸಸ್‌ನ ಉದ್ಯೋಗಿ ಎಂದು ತಿಳಿದುಬಂದಿದೆ.ಈತ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಅತೀ ವೇಗವಾಗಿ, ಅಜಾಗರೂಕತೆಯಿಂದ ಧಾವಿಸಿ ಬಂದ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದ್ದು. ಇದರಿಂದ ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ […]

ಮಂಗಳೂರು: ಲಾರಿ ಢಿಕ್ಕಿ- ಸೈಕಲ್ ಸವಾರ ಸ್ಥಳದಲ್ಲೇ ಸಾವು Read More »

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ

ಬೆಂಗಳೂರು.ಮೇ.21: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮುಂದುವರಿದಿದ್ದು ಈ ನಿಟ್ಟಿನಲ್ಲಿ ಮುಂದಿನ ಎರಡು ವಾರ ಲಾಕ್ ಡೌನ್ ಮಾಡುವುದು ಬಹುತೇಕ ಖಚಿತವಾಗಿದೆ.ವಿಧಾನಸೌಧದಲ್ಲಿಂದು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ವಿಪತ್ತು ನಿರ್ವಹಣಾ ಸಮಿತಿ ಯ ಅಧಿಕಾರಿಗಳು ರಾಜ್ಯದ ಸ್ಥಿತಿಗತಿಯ ಬಗ್ಗೆ ಗಂಭೀರ ಪ್ರಸ್ತಾಪ ಮಾಡಿದ್ದು, ರಾಜ್ಯದ ಭವಿಷ್ಯದ ದೃಷ್ಟಿಯಿಂದ 15 ದಿನ ಲಾಕ್ ಡೌನ್ ಬೇಕು ಎಂದು ಒತ್ತಾಯಿಸಿದ್ದಾರೆ. ಲಾಕ್ ಡೌನ್ ತೆರವಿನಿಂದ

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ Read More »

ಅಪ್ಪಿಕೋ ಚಳುವಳಿ ನೇತಾರ ಬಹುಗುಣ ಕೊರೊನಾಗೆ ಬಲಿ

ಪರಿಸರವಾದಿ ಹಾಗೂ ಅಪ್ಪಿಕೊ (ಚಿಪ್ಕೊ) ಚಳವಳಿಯ ನೇತಾರ ಸುಂದರಲಾಲ್ ಬಹುಗುಣ (94) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಸುಂದರಲಾಲ್ ಬಹುಗುಣ ಅವರು ಮೇ 8ರಂದು ರಿಷಿಕೇಶದ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಥಳೀಯ ವರದಿಗಳ ಪ್ರಕಾರ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಮಧುಮೇಹವನ್ನು ಹೊಂದಿದ್ದರು. ಇದನ್ನು ಕೊರೋನಾ ವೈರಸ್ ಪ್ರಕರಣಗಳಲ್ಲಿ ಕೊಮೊರ್ಬಿಡಿಟಿ ಎಂದು ಪರಿಗಣಿಸಲಾಗುತ್ತದೆ. ತಜ್ಞ ವೈದ್ಯರ ತಂಡ ಬಹುಗುಣ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಎಲೆಕ್ಟ್ರೋಲೈಟ್‌ಗಳು ಮತ್ತು ಯಕೃತ್ತಿನ ಕಾರ್ಯವನ್ನು ಒಳಗೊಂಡಂತೆ ರಕ್ತದಲ್ಲಿನ ಸಕ್ಕರೆ

ಅಪ್ಪಿಕೋ ಚಳುವಳಿ ನೇತಾರ ಬಹುಗುಣ ಕೊರೊನಾಗೆ ಬಲಿ Read More »

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ

ಬೆಂಗಳೂರು, ಮೇ ೨೧: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗಿ ಆಂಬ್ಯುಲೆನ್ಸ್ಗಳು ಬೇಕಾ ಬಿಟ್ಟಿ ಬಾಡಿಗೆಗಳನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಉದ್ದೇಶದಿಂದ ಖಾಸಗಿ ಆಂಬ್ಯುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಂಬ್ಯುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದ್ದು, ಸಾಮಾನ್ಯ ಆಂಬ್ಯುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆಂಬ್ಯುಲೆನ್ಸ್)ಮೊದಲ ೧೦ ಕಿ.ಮೀಟರ್‌ಗಳಿಗೆ ೧೫೦೦ ರೂ.ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. ೧೦ ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ ೧೨೦ ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್,

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ Read More »

ಮಹಾರಾಷ್ಟ್ರ: 13 ನಕ್ಸಲರ ಎನ್ಕೌಂಟರ್

ಮಹಾರಾಷ್ಟ್ರ: ರಾಜ್ಯದ ಗಡಚಿರೋಲಿ ಜಿಲ್ಲೆಯ ಕೊಟ್ಮಿ ಅರಣ್ಯ ಪ್ರದೇಶದಲ್ಲಿ ಸಿ-60 ಕಮಾಂಡೋ ಪೊಲೀಸರು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತ್ಯೆಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಜಾನೆ ಐದು ಮೂವತ್ತರ ಸುಮಾರಿಗೆ ಮಾವೋವಾದಿಗಳು ಅರಣ್ಯದ ನಡುವೆ ಒಟ್ಟು ಸೇರಿರುವುದಾಗಿ ಖಚಿತ ಮಾಹಿತಿ ಪಡೆದ ಪೊಲೀಸರು ಸುಸಜ್ಜಿತ ದಾಳಿ ನಡೆಸಿ ನಕ್ಸಲರನ್ನು ಎನ್ಕೌಂಟರ್ ಮಾಡಿದ್ದಾರೆ. ಪೊಲೀಸರನ್ನು ಕಂಡ ನಕ್ಸಲರು ತೀವ್ರ ಪ್ರತಿದಾಳಿ ನಡೆಸಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಒಟ್ಟು

ಮಹಾರಾಷ್ಟ್ರ: 13 ನಕ್ಸಲರ ಎನ್ಕೌಂಟರ್ Read More »

ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಮಂಬೈ: ಮುಂದಿನ ತಿಂಗಳು ಸೀಮಿತ ಓವರ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಬ್ಯಾಟ್ಸ್ ಮ್ಯಾನ್ ‘ಭಾರತದ ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಭಾರತದ ಒಂದು ತಂಡ ಮುಂದಿನ ಎರಡು ತಿಂಗಳುಗಳಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅದೇ ಸಮಯ ಭಾರತದ ಇನ್ನೊಂದು ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ

ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ Read More »

ಭಾರತೀಯ ವಾಯುಪಡೆಯ ಮಿಗ್ -21 ವಿಮಾನ ಪತನ

ಪಂಜಾಬ್‌: ಶುಕ್ರವಾರ ಮುಂಜಾನೆ ಪಂಜಾಬ್‌ನ ಮೊಗಾ ಬಳಿ ನಡೆದ ಮಿಗ್ -21 ವಿಮಾನ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಪೈಲಟ್ ಮಾರಣಾಂತಿಕ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಶುಕ್ರವಾರ ಮುಂಜಾನೆ 1 ಗಂಟೆ ಸುಮಾರಿಗೆ ಮೊಗಾದ ಬಾಗಾಪುರಾನದ ಲ್ಯಾಂಗಿಯಾನಾ ಖುರ್ದ್ ಗ್ರಾಮದಲ್ಲಿ ಐಎಎಫ್‌ನ ಮಿಗ್ -21 ಅಪಘಾತಕ್ಕೀಡಾಗಿದೆ. ಘಟನೆಯು ವಾಡಿಕೆಯ ತರಬೇತಿ ಹಂತದಲ್ಲಿ ನಡೆದಿದೆ ಎಂದು ವಾಯುಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಅಪಘಾತದಲ್ಲಿ ಪೈಲೇಟ್ ವಿಮಾನದಿಂದ ಹೊರಗೆಸೆಯಲ್ಪಟ್ಟಿದ್ದು, ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.

ಭಾರತೀಯ ವಾಯುಪಡೆಯ ಮಿಗ್ -21 ವಿಮಾನ ಪತನ Read More »

ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….!

ತಿರುವನಂತಪುರಂ: ಕೇರಳ ರಾಜ್ಯದ ಮುಖ್ಯಮಂತ್ರಿ ಎರಡನೇ ಬಾರಿಗೆ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ತಿರುವನಂತಪುರಂನ ಸ್ಟೇಡಿಯಂ ಒಂದರಲ್ಲಿ ಕೇರಳ ಹೈಕೋರ್ಟ್ ಆದೇಶದಂತೆ ಸರಳವಾಗಿ ನಡೆದ ಸಮಾರಂಭದಲ್ಲಿ ಎಲ್ ಡಿ ಎಫ್ ಮೈತ್ರಿಕೂಟದ ಇತರೆ 20 ಸಚಿವರೊಂದಿಗೆ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿರೋಧ ಪಕ್ಷ ಯುಡಿಎಫ್ ಸದಸ್ಯರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು, ಕೋರ್ಟ್ ಆದೇಶವನ್ನು ಪಾಲಿಸುವ ದೃಷ್ಟಿಯನ್ನು ಹಾಜರಾಗಿಲ್ಲ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಸ್ಪಷ್ಟೀಕರಿಸಿದ್ದಾರೆ. ಹೊಸಬರಿಗೆ ಸಚಿವಸ್ಥಾನ ನೀಡಲಾಗಿದ್ದರೂ, ಕಳೆದ ಬಾರಿ ರಾಜ್ಯ ಸರ್ಕಾರದಲ್ಲಿ ಆರೋಗ್ಯ

ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….! Read More »

ಕೋವಿಡ್ ನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಕೇಂದ್ರಕ್ಕೆ ಸೋನಿಯಾ ಸಲಹೆ

ನವದೆಹಲಿ: ಕೊರೋನಾ ಸೋಂಕಿಗೆ ಒಳಗಾಗಿ ದುಡಿದು ಸಾಕುವ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕೆಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ಪತ್ರವೊಂದನ್ನು ಬರೆದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿನಂತಿಸಿಕೊಂಡಿದ್ದಾರೆ. ಇದಕ್ಕಾಗಿ ದೇಶವ್ಯಾಪಿ ಇರುವ ನವೋದಯ ವಿದ್ಯಾಲಯಗಳನ್ನು ಬಳಸಿಕೊಳ್ಳಬಹುದೆಂಬ ಸಲಹೆಯನ್ನೂ ಅವರು ನೀಡಿದ್ದಾರೆ.ಇದರೊಂದಿಗೆ ತಮ್ಮ ದಿವಂಗತ ಪತಿ ಮತ್ತು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ ಮಹತ್ತರ ಕೊಡುಗೆಯನ್ನು ಮತ್ತೆ ಸ್ಮರಿಸಿಕೊಂಡಾಗುತ್ತದೆ ಎಂದು ಪತ್ರದಲ್ಲಿ ಸೋನಿಯಾ ಉಲ್ಲೇಖಿಸಿದ್ದಾರೆ ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳಿಗೆ ನೆರವಾಗಿ,

ಕೋವಿಡ್ ನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಕೇಂದ್ರಕ್ಕೆ ಸೋನಿಯಾ ಸಲಹೆ Read More »

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಬಾಬಾಗೌಡ ಪಾಟೀಲ್ ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಬಾಬಾಗೌಡ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಬೆಳಗಾವಿಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಪಾಟೀಲ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ Read More »