ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ದೆಹಲಿ : ಕೊರೋನಾ ಸೋಂಕಿನ ನಂತರ ಉಂಟಾದಂತ ತೊಂದರೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯಕ್ಕೆ ಒಳಗಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget ... ..

ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕೋವಿಡ್-19 ರ ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ ಸೋಂಕು ತಗುಲಿ ಚಿಕಿತ್ಸೆಯ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಆದರೆ ಇಂದು ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *