ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು “ಗಾನಸುಧೆ” ಕಾರ್ಯಕ್ರಮ

ಮಂಗಳೂರು: ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು ಕೋವಿಡ್ ವಾರಿಯರ್ಸ್ ಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಗಾನಸುಧೆ’ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget ... ..

ಇಂದು ಮಧ್ಯಾಹ್ನ ಫೇಸ್ ಬುಕ್ ಲೈವ್ ನಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ನಡೆಸಿಕೊಡುವ ಸಂಗೀತ ಕಾರ್ಯಕ್ರಮ ಪ್ರಸಾರವಾಗಲಿದೆ. ಕೇಳಲಿಚ್ಚಿಸುವವರು Arvind Vivek’s ಫೇಸ್ಬುಕ್ ಪೇಜ್ ಅನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಈ ಕಾರ್ಯಕ್ರಮ ನಡೆಸಲಾಗುತ್ತಿದೆ. “ಗಾನಸುಧೆ”ಯನ್ನು ರಾಜ್ಯದ ಎಲ್ಲಾ ಕೋವಿಡ್ ವಾರಿಯರ್ಸ್ ಗಳಿಗೆ ಸಮರ್ಪಿಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Leave a Comment

Your email address will not be published. Required fields are marked *