Ad Widget .

ಚಿತ್ರರಂಗದ ನೆರವಿಗೆ ನಿಂತ ನಟ ಯಶ್ | 3000ಕ್ಕೂ ಅಧಿಕ ಕಾರ್ಮಿಕರಿಗೆ ತಲಾ 5000

ಬೆಂಗಳೂರು: ಲಾಕ್ಡೌನ್ ಇರುವ ಕಾರಣ ಸಂಪಾದನೆ ಇಲ್ಲದೆ ಸಂಕಷ್ಟ ಎದುರಿಸುತ್ತಿರುವ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ನಟ ಯಶ್ ಸಹಾಯಧನ ಘೋಷಿಸಿದ್ದಾರೆ.

Ad Widget . Ad Widget .

ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಾಕಿಂಗ್ ಸ್ಟಾರ್ ಈ  ಮಾಹಿತಿ ಹಂಚಿಕೊಂಡಿದ್ದು ಚಿತ್ರರಂಗದ ಮೂರು ಸಾವಿರಕ್ಕೂ ಅಧಿಕ ಕಲಾವಿದರ ಹಾಗೂ ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ ರೂ. 5000 ದಂತೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ. 

Ad Widget . Ad Widget .

ಕಣ್ಣಿಗೆ ಕಾಣದ ವೈರಸ್‌ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ₹5 ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್‌ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್‌ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್‌ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್‌ ತಿಳಿಸಿದ್ದಾರೆ.Attachments area

Leave a Comment

Your email address will not be published. Required fields are marked *