Ad Widget .

ಎಕ್ಸ್ ಕ್ಲೂಸಿವ್ ಸಮಾಚಾರ : ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ | ಸೈಲೆಂಟ್ ಸಚಿವರಿಗೆ ಗೇಟ್ ಪಾಸ್.!

ಬೆಂಗಳೂರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ನಡೆದಿರುವ ಹೊತ್ತಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ರಹಸ್ಯ ಚರ್ಚೆ ನಡೆಸಿದ್ದು, ಹಲವು ಸಚಿವರು ಮನೆಗೆ ತೆರಳುವ ಸಾಧ್ಯತೆ ಇದೆ.

Ad Widget . Ad Widget .

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಅವರು ಸಮಾಲೋಚನೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟ ಪುನಾರಚನೆ, ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆ ಕುರಿತಾಗಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Ad Widget . Ad Widget .

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ, ಕ್ರಿಯಾಶೀಲವಾಗಿ ತೊಡಗಿಕೊಳ್ಳದ ಕೆಲವು ಸಚಿವರನ್ನು ಕೈಬಿಡಲಾಗುವುದು. ಸಂಕಷ್ಟದ ಹೊತ್ತಲ್ಲಿ ಆಸಕ್ತಿಯಿಂದ ಕೆಲಸ ಮಾಡಿದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತಾಗಿ ಚರ್ಚೆ ನಡೆದಿದೆ.
ಕ್ರಿಯಾಶೀಲವಾಗಿಲ್ಲದ ಕೆಲವು ಸಚಿವರನ್ನು ಕೈಬಿಟ್ಟು ಸಂಪುಟ ಪುನರ್ ರಚಿಸುವ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೇ, ಪಕ್ಷ ಅಧಿಕಾರದಲ್ಲಿದ್ದರೂ ಕೂಡ ಕೆಲವು ಸಚಿವರು ಮತ್ತು ಪದಾಧಿಕಾರಿಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ. ಬೆಡ್, ಔಷಧ, ಆಮ್ಲಜನಕ ತೀವ್ರ ಕೊರತೆ ಎದುರಾದ ಸಂದರ್ಭದಲ್ಲಿಯೂ ಅನೇಕರು ಗಮನಹರಿಸದ ಕಾರಣ ಅರುಣ್ ಸಿಂಗ್ ಅವರಿಗೆ ದೂರು ಬಂದಿವೆ. ಕ್ರಿಯಾಶೀಲವಲ್ಲದ ಸಚಿವರು ಮತ್ತು ಪದಾಧಿಕಾರಿಗಳನ್ನು ಬದಲಾಯಿಸುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *