Ad Widget .

ಜೂ. 14ರವರೆಗೆ ರಾಜ್ಯದಲ್ಲಿ ಲಾಕ್ ಡೌನ್? ಏನಿರುತ್ತೆ? ಏನಿರಲ್ಲ…

ಬೆಂಗಳೂರು, ಜೂನ್ 3: ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ, ಮಾರ್ಗಸೂಚಿ ಶೀಘ್ರವೇ ಹೊರ ಬರಲಿದೆ. ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವರವಾಗಿ ತಿಳಿಸಲಿದ್ದಾರೆ.

Ad Widget . Ad Widget .

ಕರ್ನಾಟಕದಲ್ಲಿ ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮೇ 10 ರಿಂದ 14ರ ತನಕ ಲಾಕ್‌ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್‌ಡೌನ್ ಮುಂದುವರೆದಿದೆ. ಈಗ ಜೂನ್ 14ರ ತನಕ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕೆಲವೊಂದು ಆದ್ಯತಾ ವಲಯಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ‌ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget . Ad Widget .

ಲಾಕ್ ಡೌನ್ ನಿಂದ ಕೆಲವು ವಲಯಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿದ್ದು, ಉಳಿದಂತೆ ಬಹುತೇಕ ಈ ಹಿಂದೆ ಇರುವಂತೆಯೇ ಮಾರ್ಗಸೂಚಿ ಮುಂದುವರೆಸಲಾಗುವುದು‌ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *