Ad Widget .

ರಾಜ್ಯದಲ್ಲಿ ಜೂ.14ರವರೆಗೆ ಲಾಕ್ ಡೌನ್ ವಿಸ್ತರಣೆ: ಎರಡನೇ ಕೋವಿಡ್ ಪ್ಯಾಕೇಜ್ ಘೋಷಿಸಿದ ಸಿ.ಎಂ

ಬೆಂಗಳೂರು. ಜೂ.3: ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಅನ್ನು ಜೂ.14ರವರೆಗೆ ವಿಸ್ತರಿಸಿ ಸಿಎಂ ಯಡಿಯೂರಪ್ಪ ಆದೇಶಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ ಜೂ.14ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

Ad Widget . Ad Widget .

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಇಂದು ಘೋಷಣೆ ಮಾಡಲಾಗುತ್ತಿದೆ. ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರದಂತೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ.
ಚಲನ ಚಿತ್ರ, ದೂರು ದರ್ಶನ ಮಾಧ್ಯಮಿತ್ರಿಗೆ 3 ಸಾವಿರ ನೀಡಲಾಗುತ್ತದೆ. ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ ಎಂದರು. ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ ಕೂಡ ನೀಡಲಾಗುತ್ತದೆ ಎಂದರು.

Ad Widget . Ad Widget .

ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವಂತ ತಲಾ ಮೂರು ಸಾವಿರ ನೀಡಲು ನಿರ್ಧಾರ ಮಾಡಲಾಗಿದೆ. ಮಸೀದಿಯಲ್ಲಿನ ಪೇಜಿಸಿಮೋಗಳಿಗೂ ತಲಾ ಮೂರು ಸಾವಿರ ಕೊಡಲು ನಿರ್ಧಾರ ಮಾಡಲಾಗಿದೆ ಎಂದರು.

ಆಶಾ ಕಾರ್ಯಕರ್ತರು ಕೂಡ ಕೊರೋನಾ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮೂರು ಸಾವಿರ ನೀಡಲಾಗುತ್ತದೆ. ಇದರಿಂದ 42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ನೀಡಲಾಗುತ್ತದೆ ಎಂದರು.

ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುಧಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ. ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದರು.

ಕೈಗಾರಿಕೆಗಳಿಗೆ ಜೂನ್ 2021 ನಿಗದಿತ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಂಎಸ್‌ಎಂಇ ಕೈಗಾರಿಕೆ ಹೊರತುಪಡಿಸಿ, ಇತರೆ ಕೈಗಾರಿಕೆಗಳ ಗ್ರಾಹಕರಿಗೆ ಮೇ, ಜೂನ್ ತಿಂಗಳ ವಿದ್ಯುತ್ ಶುಲ್ಕ ಪಾವತಿಯಿಂದ ಜುಲೈ 30ರವರೆಗೆ ವಿನಾಯ್ತಿ ನೀಡಲಾಗಿದೆ ಎಂದರು.

Leave a Comment

Your email address will not be published. Required fields are marked *