ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿಗಳಾದ ಮಹಮ್ಮದ್ ಮುನಾಫ್, ಮಹಮ್ಮದ್ ಮುಝಾಂಬಿಲ್ ಮತ್ತು ಅಹಮ್ಮದ್ ಮಸೂಕ್ ರವರನ್ನು ವಶಕ್ಕೆ ಪಡೆದಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ಪೊಲೀಸರಿಗೆ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ದೊರೆತಾಗ ಕೊಣಾಜೆ ವಿಶ್ವವಿದ್ಯಾನಿಲಯದ ಗಣೇಶ್ ಮಹಲ್ ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ತಪಾಸಣೆ ಮಾಡಿ, ಅವರಿಂದ ಒಟ್ಟು 170 ಗ್ರಾಂ ತೂಕದ ಸುಮಾರು 10,20,000 ರೂ ಮೌಲ್ಯದ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು 5 ಲಕ್ಷ ಮೌಲ್ಯದ ಕಾರನ್ನು ಹಾಗೂ 17,000 ರೂ. ಮೌಲ್ಯದ ನಾಲ್ಕು ಮೊಬೈಲ್ ಫೋನ್ ಗಳುನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 17,37,000 ಆಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್
