Ad Widget .

ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್​ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್​ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ.

Ad Widget . Ad Widget .

ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಹೇಳಿದ್ದಾರೆ. ಬಹುತೇಕ ಶಾಲಾ-ಕಾಲೇಜುಗಳು ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ಇಲಾಖೆ ಅಧಿಕೃತವಾಗಿ ಎಂದಿನಿಂದ ಶೈಕ್ಷಣಿಕ ವರ್ಷ ಆರಂಭಿಸಲಾಗುತ್ತದೆ ಎಂಬ ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, ಜೂ.15ರಿಂದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ.
ಇದು ಮುಗಿಯುತ್ತಿದಂತೆಯೇ ಜು.1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಕರೊನಾ ಪರಿಸ್ಥಿತಿ ಇದೇ ರೀತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳ ಬದಲಾಗಿ ಆನ್‍ಲೈನ್ ತರಗತಿಗಳನ್ನೇ ನಡೆಸಲಾಗುತ್ತದೆ. ಈ ವೇಳಾಪಟ್ಟಿಯು ಕರೊನಾ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿದೆ. ಒಂದು ವೇಳೆ ಪರಿಸ್ಥಿತಿ ಸುಧಾರಿಸಲಿಲ್ಲವಾದರೆ ಮುಂದೆ ಹೋಗುವ ಸಾಧ್ಯತೆ ಕೂಡ ಇದೆ ಎಂದು ಸ್ಪಷ್ಟಪಡಿಸಿದರು.

Ad Widget . Ad Widget .

Leave a Comment

Your email address will not be published. Required fields are marked *