Ad Widget .

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Ad Widget . Ad Widget .

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಾಳೆಯಿಂದ ರಾಜ್ಯದಲ್ಲಿ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

Ad Widget . Ad Widget .

ಸದ್ಯ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ. ಇದು ಜೂನ್ 6ರ ತನಕವೂ ಮುಂದುವರೆಯುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

Leave a Comment

Your email address will not be published. Required fields are marked *