ಎಸ್ಸೆಸ್ಸೆಲ್ಸಿ ಮಕ್ಕಳು ಭಯಪಡಬೇಕಿಲ್ಲ : ಪರೀಕ್ಷೆ ಕುರಿತು ಅಭಯ ನೀಡಿದ ಸಿ.ಎಂ

ಬೆಳಗಾವಿ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೋವಿಡ್ ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.

Ad Widget ... ..

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಇಲ್ಲವಾದಲ್ಲಿ ಈ ವರ್ಷ ಪರೀಕ್ಷೆ ನಡೆಸುವುದಿಲ್ಲ ಎಂದು ಅಭಯ ನೀಡಿದರು.

Ad Widget

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸುವುದಾಗಿ ಘೋಷಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್.ಎಸ್.ಎಲ್.ಸಿ.ಗೆ ಎರಡು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *