Ad Widget .

ವಿವಿಧ ಬೇಡಿಕೆಗಳ‌ ಈಡೇರಿಕೆಗೆ ಒತ್ತಾಯಿಸಿ ಜೂ.5ರಂದು ಅತಿಥಿ ಉಪನ್ಯಾಸಕರಿಂದ ಆನ್ಲೈನ್ ಚಳುವಳಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ.ಪೂ ಅತಿಥಿ ಉಪನ್ಯಾಸಕರ ಸಂಘವು ಜೂ.5 ರಂದು ಆನ್ ಲೈನ್ ಚಳುವಳಿ ನಡೆಸಲಿದೆ.
ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರ ಬಾಕಿ ಇರುವ 2021 ನೇ ಶೈಕ್ಷಣಿಕ ಸಾಲಿನ ಎಲ್ಲಾ ಮಾಸಿಕ ವೇತನವನ್ನು ಬಿಡುಗಡೆ ಮಾಡಬೇಕು. ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. ಸೇವಾ ಭದ್ರತೆಯನ್ನು ಖಾತ್ರಿ ಮತ್ತು ಈ ಹಿಂದೆ ಕಾರ್ಯನಿರ್ವಹಿಸುತ್ತಾ ಇದ್ದ ಅತಿಥಿ ಉಪನ್ಯಾಸಕರನ್ನು ಮುಂದಿನ ದಿನಗಳಲ್ಲಿ ಸೇವೆಗೆ ನೇಮಕಾತಿ ಮಾಡಿಕೊಳ್ಳವುದು, 2021 ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರ ಫೆಬ್ರವರಿ ತಿಂಗಳ ಗೌರವ ಧನ ಮಾತ್ರ ಬಿಡುಗಡೆ ಮಾಡಿದ್ದು, ಸರ್ಕಾರವು ಮಾರ್ಚ್ ತಿಂಗಳು ಸೇರಿದಂತೆ ಇತರ ತಿಂಗಳ ಗೌರವ ಧನ ಬಿಡುಗಡೆ ಮಾಡಿಲ್ಲ, ಈ ಕೊರೋನ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಉಪನ್ಯಾಸಕರ ಕುರಿತು ಆಲೋಚಿಸದಿರುವುದು ಸೇರಿದಂತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಕಷ್ಟ ನಷ್ಟಗಳನ್ನು ತಿಳಿಸುವ ನಿಟ್ಟಿನಲ್ಲಿ ನಾಳೆ ರಾಜ್ಯಮಟ್ಟದ ಆನ್ಲೈನ್ ಚಳುವಳಿ ನಡೆಯಲ್ಲಿದೆ.

Ad Widget . Ad Widget .

Leave a Comment

Your email address will not be published. Required fields are marked *