Ad Widget .

ಅಸಂಘಟಿತ ಕಾರ್ಮಿಕರಿಗೆ 2,000 ರೂ. ಪರಿಹಾರ ಧನ : ಡಿಸಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಕೋವಿಡ್‌ ಲಾಕ್‌ಡೌನ್‌ ಹಿನ್ನಲೆಯಲ್ಲಿ ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ₹2,000 ಪರಿಹಾರಧನವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.

Ad Widget . Ad Widget .

ಈ ಕುರಿತು ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲಸವಿಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಅಸಂಘಟಿತ ಕಾರ್ಮಿಕ ವಲಯದ 18 ರಿಂದ 65 ವರ್ಷದೊಳಗಿನ ಕ್ಷೌರಿಕ, ಅಗಸ, ಟೈಲರ್, ಅಕ್ಕಸಾಲಿಗ, ಕಮ್ಮಾರ, ಕುಂಬಾರ, ಗೃಹಕಾರ್ಮಿಕರು, ಚಿಂದಿ ಆಯುವವರು, ಹಮಾಲಿ ಇತ್ಯಾದಿ ಕಾರ್ಮಿಕರುಗಳು ಈ ಪರಿಹಾರ ಧನ ಪಡೆಯಲು ಅರ್ಹರು ಎಂದು ಅವರು ಹೇಳಿದ್ದಾರೆ.

Ad Widget . Ad Widget .

ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆಯಬಹುದು. ನಿಗದಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರುವ ಆಧಾರ್‌ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾಚಿತ್ರವನ್ನು ಅಪಲೋಡ್ ಮಾಡಬೇಕಾಗಿದೆ.

ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಸ್ಥಳೀಯಡಳಿತದ ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿದ ಉದ್ಯೋಗ ಪ್ರಮಾಣ ಪತ್ರದ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ನೋಂದಾಯಿತ ಕಾರ್ಮಿಕರ ಖಾತೆಗೆ ನೇರ ಜಮೆ:

ಕಟ್ಟಡ ಕಾರ್ಮಿಕರು ಕಾರ್ಮಿಕ ಕಾರ್ಡ್ ಹೊಂದಿದಲ್ಲಿ ಮತ್ತೊಮ್ಮೆ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡುವ ಅಗತ್ಯತೆ ಇರುವುದಿಲ್ಲ. ಅವರ ಖಾತೆಗೆ ನೇರವಾಗಿ ಜಮೆಯಾಗಲಿದೆ. ಕಳೆದ ಬಾರಿ ಅಗಸರು ಹಾಗೂ ಕ್ಷೌರಿಕರಿರು ನೋಂದಣಿ ಮಾಡಿ ಖಾತೆಗೆ ಹಣ ಜಮೆಯಾಗದವರೂ ಈ ಬಾರಿ ಇನ್ನೊಮ್ಮೆ ಸೇವಾ ಸಿಂಧು ಮೂಲಕ ನೋಂದಣಿ ಮಾಡಲು ಅವಕಾಶವಿರುತ್ತದೆ. ಹೊರರಾಜ್ಯದಿಂದ ಜಿಲ್ಲೆಗೆ ಬಂದು ಇಲ್ಲಿಯ ಕಾರ್ಮಿಕರಾಗಿದ್ದು ಜೊತೆಗೆ ಇಲ್ಲಿನ ಬಿ.ಪಿ.ಎಲ್. ಕಾರ್ಡ್ ಹೊಂದಿದವರೂ ಕೂಡ ಇದರ ಲಾಭ ಪಡೆಯಬಹುದಾಗಿದೆ. ಶ್ರಮಿಕರ ವರ್ಗದವರಲ್ಲಿ ಬಿ.ಪಿ.ಎಲ್. ಕಾರ್ಡ್ ಅಥವಾ ಟ್ರೇಡ್ ಲೈಸನ್ಸ್ ಹೊಂದಿರುವವ ಎಲ್ಲರಿಗೂ ಪರಿಹಾರ ಮೊತ್ತ ಸಿಗುವಂತೆ ಅಧಿಕಾರಿಗಳು ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Leave a Comment

Your email address will not be published. Required fields are marked *