Ad Widget .

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು.

Ad Widget . Ad Widget .

ಮೋದಿ ಭಾಷಣದ ಸಾರಾಂಶವೇನು?:
ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ ನಿರ್ಮಾಣವಾಗಿದೆ. ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಉತ್ಪನ್ನಗಳಿಗಾಗಿ ಯುದ್ಧನೋಪಾದಿಯಲ್ಲಿ ಕೆಲಸ ಮಾಡಲಾಗಿದೆ. ವಿಶ್ವದಲ್ಲಿ ಲಭ್ಯವಿರುವ ಔಷಧಗಳನ್ನು ತರಲಾಗಿದ್ದು ಯಾವುದೇ ನಿರ್ಲಕ್ಷ್ಯ ಮಾಡಿಲ್ಲ ಎಂದರು.
ಕೊರೊನಾ ವಿರುದ್ಧ ಹೋರಾಟದಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಲಸಿಕೆ ಈ ಮಹಾಮಾರಿಗೆ ಸಂಜೀವಿನಿ. ವಿಶ್ವದಲ್ಲಿ ಲಸಿಕೆ ಉತ್ಪಾದಿಸುವ ಕಂಪನಿಗಳು ಕಡಿಮೆ ಸಂಖ್ಯೆಯಲ್ಲಿದ್ದು, ಲಸಿಕೆಗೆ ಬೇಡಿಕೆ ಹೆಚ್ಚಿದೆ. ಅದಾಗ್ಯೂ ಲಸಿಕೆ ಹಂಚಿಕೆಯಲ್ಲಿ ಭಾರತ ಮುಂದಿದೆ ಎಂದು ಮೋದಿ ಹೇಳಿದ್ದಾರೆ.
ಮಿಷನ್ ಇಂದ್ರ ಧನುಷ್ ಯೋಜನೆ ಮೂಲಕ ಲಸಿಕೆ ನೀಡಲಾಗುತ್ತಿದ್ದು, ಇದುವರೆಗೂ 23 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಏಳು ಕಂಪನಿಗಳು ವಿಭಿನ್ನ ಲಸಿಕೆ ತಯಾರಿಕೆಗೆ ಮುಂದಾಗಿದ್ದು, ಮೂರು ಲಸಿಕೆಗಳ ಟ್ರಯಲ್ ಸಹ ನಡೆಸಲಾಗುತ್ತಿದೆ. ಮಕ್ಕಳಿಗೆ ಕೊರೊನಾಂತಕ ಹಿನ್ನೆಲೆ ಎರಡು ವ್ಯಾಕ್ಸಿನ್ ಗಳ ಟ್ರಯಲ್ ನಡೆಯುತ್ತಿದೆ. ಇನ್ನು ಮುಂದೆ ಲಸಿಕೆಯ ಪೂರ್ಣ ಹಂಚಿಕೆಯನ್ನ ಕೇಂದ್ರವೇ ತೆಗೆದುಕೊಳ್ಳಲಿದೆ. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಭಾರತ ಸರ್ಕಾರ ಕೊರೊನಾ ಲಸಿಕೆ ನೀಡಲಿದೆ. ಕೇಂದ್ರ ಸರ್ಕಾರವೇ ಲಸಿಕೆ ಖರೀದಿಸಿ, ರಾಜ್ಯಗಳಿಗೆ ನೀಡುತ್ತದೆ. ಲಸಿಕೆಗಾಗಿ ರಾಜ್ಯಗಳು ಹಣ ನೀಡುವಂತಿಲ್ಲ. ಈ ಸಂಬಂಧ ಶೀಘ್ರವೇ ಮಾರ್ಗಸೂಚಿ ಪ್ರಕಟಿಸಲಾಗುವುದು.
ಖಾಸಗಿ ಆಸ್ಪತ್ರೆಗಳಿಗೆ ಶೇ.25ರಷ್ಟು ಖರೀದಿ ನಿಯಮದಲ್ಲಿ ಬದಲಾವಣೆ ಇಲ್ಲ. ಖಾಸಗಿ ಆಸ್ಪತ್ರೆಗಳು 125 ರೂ.ಗಿಂತ ಹೆಚ್ಚಿನ ಸರ್ವಿಸ್ ಚಾರ್ಜ್ ಪಡೆಯುವಂತಿಲ್ಲ ಎಂದು ಪ್ರಧಾನಿ ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಈ ಹಿಂದೆ ಎಂಟು ತಿಂಗಳು ಉಚಿತವಾಗಿ ನೀಡಲಾಗಿತ್ತು. ಕೊರೊನಾ ಎರಡನೇ ಅಲೆ ಆರಂಭದಲ್ಲಿ ಏಪ್ರಿಲ್ ಮತ್ತು ಮೇನಲ್ಲಿ ಉಚಿತ ಪಡಿತರ ನೀಡಲಾಗಿತ್ತು. ಈಗ ಈ ಯೋಜನೆಯಲ್ಲಿ ದೀಪಾವಳಿವರೆಗೂ ಅಂದ್ರೆ ನವೆಂಬರ್ ವರೆಗೂ ಉಚಿತ ಪಡಿತರ ಲಭ್ಯವಾಗಲಿದೆ.
ಕೊರೊನಾಗೆ ಸಂಬಂಧಿಸಿದಂತೆ ಕೆಲವು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಹಾಗಾಗಿ ಜನತೆ ಎಚ್ಚರದಿಂದ ಇರಬೇಕು. ಕೊರೊನಾ ಸಂಖ್ಯೆ ಇಳಿಕೆಯಾದ್ರೂ ಎಚ್ಚರಿಕೆಯಿಂದ ಇರಬೇಕು ಎಂದು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *