ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು

ಪುಣೆ: ಇಲ್ಲಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆ ಸಿಲುಕಿ 17 ಜನ ಪ್ರಾಣ ಕಳೆದುಕೊಂಡಿದ್ದಾರೆ.

Ad Widget ... ..

ಮುಲ್ಶಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಎಸ್‌ಯುಎಸ್‌ ಅಕ್ವಾ ಟೆಕ್ನಾಲಜೀಸ್’ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, 15 ಮಹಿಳೆಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದಾರೆ ಹಾಗೂ ಸಣ್ಣಪುಟ್ಟ ಗಾಯಗೊಂಡ 20 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪುಣೆ ಜಿಲ್ಲಾಡಳಿತ ತಿಳಿಸಿದೆ.
ಬೆಂಕಿ ನಂದಿಸಿ ಅವಶೇಷಗಳ ತೆರವು ಕಾರ್ಯಾಚರಣೆ ಮತ್ತು ಮೃತ ವ್ಯಕ್ತಿಗಳ ಗುರುತು ಪತ್ತೆ ಕಾರ್ಯ ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿದೆ.

Ad Widget

Leave a Comment

Your email address will not be published. Required fields are marked *