ಧರ್ಮಸ್ಥಳ: 4 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪಿ ಅರೆಸ್ಟ್

ಬೆಳ್ತಂಗಡಿ: ಯುವಕನೋರ್ವ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಷಕರು ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ad Widget ... ..

ನೀಚ ಕೃತ್ಯವೆಸಗಿ ಪೊಲೀಸರ ಅತಿಥಿಯಾದವನು ವಿಘ್ನೇಶ್ ಭಂಡಾರಿ. ಈತ ತಾಲೂಕಿನ ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಹಿಂದೊಮ್ಮೆ ಲೈಂಗಿಕ ಕಿರುಕುಳ ಎಸಗಿದ್ದ. ಆ ಸಮಯದಲ್ಲಿ ಮಗುವಿನ ಪೋಷಕರು ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಆದರೆ ಆರೋಪಿ ನೀಚ ಕೃತ್ಯವನ್ನು ಮತ್ತೆ ಮುಂದುವರಿಸಿದ್ದು, ಮಗುವಿನ ಪೋಷಕರು ನೀಡಿದ ದೂರಿನನ್ವಯ ಆತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *