Ad Widget .

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್​ ಗೌಡ ಹಾಗೂ ಶ್ರವಣ್​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು.

Ad Widget . Ad Widget .

ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್‌ ಮತ್ತು ಬ್ಲ್ಯಾಕ್​ಮೇಲ್‌ ಆರೋಪ ಮಾಡಿದ್ದರು. ನಂತರದ ಬೆಳವಣಿಗೆಗಳಲ್ಲಿ ಇಬ್ಬರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

Ad Widget . Ad Widget .

Leave a Comment

Your email address will not be published. Required fields are marked *