Ad Widget .

ನಾಯಕತ್ವ ಬದಲಾವಣೆ: ರಾಜ್ಯ ನಾಯಕರಿಗೆ ಜೂ.14 ರ ಗಡುವು ನೀಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ.
ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಹೈಕಮಾಂಡ್, ನಾಯಕತ್ವ ಬದಲಾವಣೆ ಬಗ್ಗೆ ಸಚಿವರಾಗಲಿ, ಶಾಸಕರಾಗಲಿ, ಯಾರೂ ಕೂಡ ಜೂನ್ 14ರವರೆಗೆ ಹೇಳಿಕೆ ನೀಡುವಂತಿಲ್ಲ.
ಸರ್ಕಾರದ ಹಾಗೂ ಪಕ್ಷದ ಇಮೇಜ್ ಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದೆ ಎನ್ನಲಾಗಿದೆ.
ಈ ಮೂಲಕ ಬಿಜೆಪಿ ಹೈಕಮಾಂಡ್ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದು, ಆದರೆ ಜೂನ್ 14ರ ಬಳಿಕ ವರಿಷ್ಠರ ನಡೆ ಏನಿರಬಹುದು ಎಂಬುದು ಕುತೂಹಲ ಕೆರಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *