ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಉಡುಪಿಯ ಕರಾವಳಿ ಕಾವಲು ಪೊಲೀಸ್ ಎಸ್ಪಿ ಆರ್. ಚೇತನ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.

Ad Widget ... ..

ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚೆನ್ನಣ್ಣನವರ್ ಅವರನ್ನು ಸಿಐಡಿ ವಿಭಾಗದ ಬೆಂಗಳೂರು ಎಸ್ಪಿಯಾಗಿ, ಉಡುಪಿಯ ಕರಾವಳಿ ಕಾವಲು ಪೊಲೀಸ್(ಸಿಎಸ್‍ಪಿ) ಎಸ್ಪಿ ಆರ್.ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕೋಲಾರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿ(ವೈರ್‍ಲೆಸ್) ಆಗಿ, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್ ಅವರನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ, ದಾವಣಗೆರೆ ಎಸ್ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಮೈಸೂರು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿದ್ದ ಡಾ.ಎ.ಎನ್.ಪ್ರಕಾಶ್ ಗೌಡ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗಗಕ್ಕೆ, ಹಾವೇರಿ ಎಸ್ಪಿ ಕೆ.ಜಿ.ದೇವರಾಜು ಅವರನ್ನು ಬೆಂಗಳೂರು ಸಿಐಡಿ ವಿಭಾಗದ ಎಸ್ಪಿಯಾಗಿ, ಮೈಸೂರಿನ ಎಸ್ಪಿ ಸಿ.ಬಿ.ರಿಷ್ಯಂತ್ ಅವರನ್ನು ದಾವಣಗೆರೆ ಜಿಲ್ಲೆ ಎಸ್ಪಿಯಾಗಿ, ಕಲಬುರ್ಗಿ ಜಿಲ್ಲೆಯ ಡಿಸಿಪಿ ಡಿ.ಕಿಶೋರ್ ಬಾಬು ಅವರು ಕೋಲಾರ ಎಸ್ಪಿಯಾಗಿ, ತುಮಕೂರು ಎಸ್ಪಿ ಡಾ.ಕೆ.ವಂಶಿ ಕೃಷ್ಣಾ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿ, ಬೆಂಗಳೂರಿನ ಆಂತರಿಕ ಭದ್ರತಾ ಇಲಾಖೆಯ ಎಸ್ಪಿ ಪ್ರದೀಪ್ ಗುಂಟಿ ಅವರನ್ನು ಮೈಸೂರು ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ, ಬೆಂಗಳೂರಿನ(ವೈರ್‍ಲೆಸ್) ಎಸ್ಪಿ ಎ.ಶ್ರೀನಿವಾಸುಲು ಅವವರನ್ನು ಕಲಬುರ್ಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

Ad Widget

Leave a Comment

Your email address will not be published. Required fields are marked *