Ad Widget .

ಲಾಕ್ಡೌನ್ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್ | ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ ಸಿ ಅನುಮೋದನೆ

ಬೆಂಗಳೂರು: ರಾಜ್ಯದ ಜನತೆಗೆ ಕೋವಿಡ್ ಲಾಕ್ಡೌನ್ ನಡುವೆ ಪೆಟ್ರೋಲಿಯಮ್ ಉತ್ಪನ್ನಗಳು ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂಕಷ್ಟ ಎದುರಿಸುತ್ತಿರುವಾಗಲೇ ವಿದ್ಯುತ್ ಬಿಲ್ ಏರಿಕೆ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯದಲ್ಲಿ ವಿದ್ಯುತ್​ ದರಗಳನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 135 ಪೈಸೆ (₹1.35) ಬೆಲೆ ಏರಿಕೆ ಕೋರಿ ಬಹಳ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶ ಪರಿಶೀಲಿಸಿರುವ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

Ad Widget . Ad Widget .

ಪರಿಷ್ಕೃತ ದರಗಳು ಏಪ್ರಿಲ್ 1, 2021ರ ನಂತರದ ಮೊದಲ ಮೀಟರ್ ಓದುವ ದಿನಾಂಕದಿಂದ ಬಳಕೆ ಮಾಡುವ ವಿದ್ಯುಚ್ಛಕ್ತಿಗೆ ಅನ್ವಯವಾಗುತ್ತದೆ. ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್​ಗೆ 83ರಿಂದ 168 ಪೈಸೆಗಳಷ್ಟು ಹೆಚ್ಚಳ ಕೋರಿದ್ದವು. ಪ್ರಸ್ತಾವನೆಗಳನ್ನು ಪರಿಶೀಲಿಸಿದ ಆಯೋಗವು ಶೇ 3.84ರ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಇದರಂತೆ ಏಕರೂಪದಲ್ಲಿ 30 ಪೈಸೆಗಳಷ್ಟು ದರ ಹೆಚ್ಚಳವಾಗಲಿದೆ.

Ad Widget . Ad Widget .

ಇದರ ಜೊತೆಗೆ ಎಚ್​ಟಿ ಕೈಗಾರಿಕೆಗಳಲ್ಲಿ ಬೆಳಿಗ್ಗೆ 6ರಿಂದ 10ರ ಪೀಕ್ ಅವಧಿಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ ವಿಧಿಸುತ್ತಿದ್ದ ₹ 1ರ ದಂಡವನ್ನು ಹಿಂಪಡೆಯಲಾಗಿದೆ. ಎಲ್​ಟಿ ಮಂಜೂರಾತಿ ಮಿತಿಯನ್ನು 150 ಕಿಲೋವ್ಯಾಟ್​ಗೆ ಹೆಚ್ಚಿಸಲಾಗಿದೆ. ಗೃಹಬಳಕೆ ವಿಭಾಗದಲ್ಲಿ ಮೊದಲ ಹಂತವನ್ನು (First Slab) 30 ಯೂನಿಟ್​ಗಳಿಂದ 50 ಯೂನಿಟ್​ಗಳಿಗೆ ಹೆಚ್ಚಿಸಲಾಗಿದೆ. ಸಾರ್ವಜನಿಕ ಬೀದಿದೀಪಗಳಲ್ಲಿ ಎಲ್​ಇಡಿ ಬಲ್ಬ್​ ಬಳಕೆಗೆ ಪ್ರತಿ ಯೂನಿಟ್​ಗೆ ₹1.05 ರಿಯಾಯ್ತಿ ಮುಂದುವರಿಸಲಾಗುವುದು ಎಂದು ಆಯೋಗವು ಸ್ಪಷ್ಟಪಡಿಸಿದೆ.

Leave a Comment

Your email address will not be published. Required fields are marked *