Ad Widget .

ಶಿಲ್ಪಾನಾಗ್ ರನ್ನು ಡಿಸಿ ಮಾಡಲು ಪ್ರಯತ್ನಿಸಿದ್ರಂತೆ ಬಿಜೆಪಿ ಸಂಸದ!?

ಬೆಂಗಳೂರು: ಬಿಜೆಪಿ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಗ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Ad Widget . Ad Widget .

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಬಿಗಿಯಾದ ಸರ್ಕಾರ ಇಲ್ಲದೇ ಇದ್ದರೆ ಈ ರೀತಿಯ ಅನಾಹುತಗಳಿಗೆ ದಾರಿ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಭೂ-ಹಗರಣದ ತನಿಖೆಗೆ ಮುಂದಾಗಿದ್ದೇ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣದ ಯಾವುದು? ಅದರಲ್ಲಿ ಯಾರೆಲ್ಲಾ ರಾಜಕಾರಣಿಗಳ ಶಾಮೀಲಾಗಿದ್ದಾರೆ? ಈ ವಿಷಯದಲ್ಲಿ ಯಾವ ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Ad Widget . Ad Widget .

ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ-ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು.

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ನಡುವಣ ಜಗಳಕ್ಕೆ ಅದಕ್ಕೆ ಬಿಜೆಪಿಯ ಸಂಸದ, ಶಾಸಕರು ಹಾಗೂ ಜೆಡಿಎಸ್‍ನ ಮಾಜಿ ಸಚಿವ ಸಾ.ರಾ. ಮಹೇಶ್ ಕಾರಣ ಎಂದರು.

Leave a Comment

Your email address will not be published. Required fields are marked *