ಸುಳ್ಯ: ಪಿಕಪ್ ಹಾಗೂ ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ತಾಲೂಕಿನ ಅಡ್ಕಾರ್ ಸಮೀಪದ ಮಾವಿನಕಟ್ಟೆ ಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಪಟ್ಟವನನ್ನು ಪೆರಾಜೆಯ ದಿನಕರ ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ಸ್ಥಳ ಅಪಾಯಕಾರಿ ಜಾಗವಾಗಿದ್ದು, ಹಿಂದೆ ಇಲ್ಲಿ ಹಲವಾರು ಅಪಘಾತಗಳು ಸಂಭವಿಸಿ ಜೀವಹಾನಿಗಳಾ ಗಿತ್ತು. ಪುತ್ತೂರಿನಿಂದ ಸಂಪಾಜೆಗೆ ತೆರಳುತ್ತಿದ್ದ ಪಿಕಪ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದೆ.
ಲಾರಿ ಚಾಲಕನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪಿಕಪ್ ನಲ್ಲಿ ಸಂಚರಿಸುತ್ತಿದ್ದ ಐವರು ಗಂಭೀರ ಗಾಯಗೊಂಡಿದ್ದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.