ಕರಾವಳಿಯಲ್ಲಿ ಇಂದಿನಿಂದ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಸಾರ್ವಜನಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.

Ad Widget ... ..

ಇಂದಿನಿಂದ ಅಂದರೆ ಜೂನ್ 10 ರಿಂದ ಮೂರು ದಿನ ಎಲ್ಲೊ ಅಲರ್ಟ್ ಹಾಗೂ ನಂತರದ ಮೂರು ದಿನಗಳಲ್ಲಿ (13 ರಿಂದ 15) ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಜೂನ್ 13 ಮತ್ತು 14 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Ad Widget

Leave a Comment

Your email address will not be published. Required fields are marked *