Ad Widget .

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ.

Ad Widget . Ad Widget .

ಮಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Ad Widget . Ad Widget .

ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಈ ವಿಷಯ ತಿಳಿಸಿದ್ದಾರೆ.

ದ.ಕನ್ನಡ ಸೇರಿದಂತೆ ಕೊರೊನಾ ಪ್ರಕರಣ ಹೆಚ್ಚಾಗಿರುವ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರು ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಜೂ.14ರ ಬಳಿಕ ಬಹುತೇಕ ಮತ್ತೆ ಒಂದು ವಾರಗಳ ಲಾಕ್ ಡೌನ್ ಮುಂದುವರಿಸಲಾಗುವುದು ಎಂದವರು ಹೇಳಿದರು.
ಜೂ.11ರಂದು ಸಂಸದರು, ಶಾಸಕರ ಸಭೆಯಲ್ಲಿ ಸೀಮಿತ ವಿಷಯಗಳಿಗೆ ಲಾಕ್ಡೌನ್ ನಿಂದ ರಿಯಾಯಿತಿ ನೀಡಬಹುದು ಎಂಬುದರ ಕುರಿತಂತೆ ಚರ್ಚೆ ಮಾಡಲಾಗುವುದು. ಸಭೆಯಲ್ಲಿ ಕೂಲಿ ಕಾರ್ಮಿಕರಿಗೆ ಮತ್ತು ಕೈಗಾರಿಕಾ ಕಾರ್ಮಿಕರಿಗೆ‌ ನೆರವಾಗುವ ನಿಟ್ಟಿನಲ್ಲಿ ಕೆಲವೊಂದು ಸಡಿಲಿಕೆ ಮಾಡುವ ಬಗ್ಗೆ ಚರ್ಚಿಸಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜೂ.14ರ ಬಳಿಕ ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಅನ್ನು ಕೆಲವು ಮಾರ್ಗಸೂಚಿಗಳೊಂದಿಗೆ ಸಡಿಲಿಕೆ ಮಾಡುವ ‌ಸಾಧ್ಯತೆಗಳಿವೆ, ಆದರೆ ಏಕಾಏಕಿ ಲಾಕ್ ಡೌನ್ ತೆರವು ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *